ಕಲಘಟಗಿ: ತಾಲೂಕಿನ ಆಸ್ತಕಟ್ಟಿ ಗ್ರಾಮದಲ್ಲಿ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ್ದಾರೆ.
ಕಲಘಟಗಿ ತಾಲೂಕಿನ ಆಸ್ತಕಟ್ಟಿ ಗ್ರಾಮದ ರೈತ ಶೇಖಪ್ಪ ಅವ್ವಣ್ಣವರ (33) ಮೃತ ದುರ್ಧೈವಿ. ಶೇಖಪ್ಪ ಅವರು ಬುಧವಾರ ಮಧ್ಯಾಹ್ನ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದ್ದು, ಚಿಕಿತ್ಸೆಗೆಂದು ಕಲಘಟಗಿ ಸರಕಾರಿ ಆಸ್ಪತ್ರೆಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಮೃತರ ಕುಟುಂಬಕ್ಕೆ ಸರಕಾರ ಪರಿಹಾರ ನೀಡುವಂತೆ ಸಂಗ್ರಾಮ ಸೇನೆ ಅಧ್ಯಕ್ಷ ಸಾತಪ್ಪ ಕುಂಕೂರ ಆಗ್ರಹಿಸಿದ್ದಾರೆ.
Kshetra Samachara
08/10/2020 09:52 pm