ಹುಬ್ಬಳ್ಳಿ: ಐಪಿಎಲ್ ಕ್ರಿಕೆಟ್ ಟೂರ್ನಿಯ ಪಂದ್ಯಗಳ ವೇಳೆ ಬೆಟ್ಟಿಂಗ್ನಲ್ಲಿ ತೊಡಗಿದ್ದ ಖಚಿತ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದು, 6.28 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಚೇತನಾ ಕಾಲೊನಿಯ ಧರ್ಮೇಂದ್ರ ಚೌಧರಿ, ಕೇಶ್ವಾಪುರದ ಸದಾನಂದ ಬದ್ದಿ ಮತ್ತು ಜೆ.ಸಿ. ನಗರದ ಪಾರಸಮಲ್ ರಾಠೋಡ ಎಂಬುವರನ್ನು ಬಂಧಿಸಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
10/10/2020 09:36 am