ಹುಬ್ಬಳ್ಳಿ: ಲಂಚ ಪಡೆಯುತ್ತಿದ್ದಾಗಲೇ ದುಮ್ಮವಾಡದ ಕಂದಾಯ ನಿರೀಕ್ಷಕ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾನೆ.
ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಭ್ರಷ್ಟ ಅಧಿಕಾರಿಯಾಗಿದ್ದು, ಸಾರ್ವಜನಿಕರಿಗೆ ಮನೆ ಮಂಜೂರು ಮಾಡಲು 30 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಪೈಕಿ 20 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ. ಸಾರ್ವಜನಿಕರು ನೀಡಿದ ದೂರಿನ ಅನ್ವಯ ದಾಳಿ ನಡೆಸಿದ ಅಧಿಕಾರಿಗಳು ಭ್ರಷ್ಟಾಚಾರ ನಿಯಂತ್ರಣಕ್ಕೆ ಮುಂದಾಗಿದ್ದಾರೆ.
Kshetra Samachara
16/10/2020 06:59 pm