ಹುಬ್ಬಳ್ಳಿ:ಕೆಐಡಿಬಿ ಸಹಾಯಕ ಕಾರ್ಯದರ್ಶಿ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.
ಕೆಐಡಿಬಿ ಸಹಾಯಕ ಕಾರ್ಯದರ್ಶಿ ಹರೀಶ್ ಹಳೇಪೇಟ್ ಎಂಬುರವರ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ
ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಧಾರವಾಡ ಎಸಿಬಿ ಅಧಿಕಾರಿಗಳಿಂದ ಹುಬ್ಬಳ್ಳಿಯ ಹೆಗ್ಗೇರಿಯ ಕೋಟಿಲಿಂಗ ನಗರದಲ್ಲಿರೋ ಮನೆ ಹಾಗೂ ಇನ್ನಿತರ ಕಡೆ ದಾಳಿ ನಡೆಸಿದ್ದಾರೆ.
ಬೆಂಗಳೂರು ಕೆಐಡಿಬಿಯಲ್ಲಿ ಕೆಲಸ ಮಾಡುತ್ತಿದ್ದ ಹರೀಶ್ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Kshetra Samachara
21/10/2020 10:47 am