ಹುಬ್ಬಳ್ಳಿ: ಬೈಕ್ ನಲ್ಲಿ ಬಂದಿದ್ದ ಇಬ್ಬರು ಖದೀಮರು ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ತೋರಿಸಿ ವ್ಯಕ್ತಿಯೊಬ್ಬರ ಕೊರಳಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಇಂದು ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ರಾಜಧಾನಿ ಕಾಲೋನಿಯಲ್ಲಿ ನಡೆದಿದೆ.
ಬೆಳಿಗ್ಗೆ ವಾಕಿಂಗ್ ಮಾಡುವ ಸಂದರ್ಭದಲ್ಲಿ ವಿಳಾಸ ಕೇಳಿದ ನೆಪದಲ್ಲಿ ಕೊರಳಲ್ಲಿದ್ದ ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರವಾಣಿ ಮೂಲಕ ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ನೀಡಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
24/10/2020 09:18 am