ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದದ ಯುವತಿ ಪಾಲಕರ ಎದುರೇ ಭೀಮಾನದಿಗೆ ಹಾರಿ ಆತ್ಮಹತ್ಯೆ

ವಿಜಯಪುರ: ಭೀಮಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಆಲಮೇಲ ತಾಲೂಕಿನ ದೇವಣಗಾಂವ್ ಬಳಿಯ ಸೇತುವೆಯಲ್ಲಿ ನಡೆದಿದೆ.

ಧಾರವಾಡ ಜಿಲ್ಲೆ ನವಲಗುಂದದ ನಿವಾಸಿ ಐಶ್ವರ್ಯ ಶ್ರೀಪಾಲ್ ಕಬ್ಬಿನ (20) ಆತ್ಮಹತ್ಯೆಗೆ ಶರಣಾದ ಯುವತಿ. ಐಶ್ವರ್ಯ ಕುಟುಂಬಸ್ಥರೊಂದಿಗೆ ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇಗುಲಕ್ಕೆ ಹೊರಟಿದ್ದಳು. ಈ ವೇಳೆ ಐಶ್ವರ್ಯ ನದಿಗೆ ಕಾಯಿನ್ ಹಾಕಬೇಕು ಎಂದು ಹೇಳಿ ವಾಹನ ನಿಲ್ಲಿಸಿದ್ದಳು. ಆದರೆ ನೋಡನೋಡುತ್ತಿದ್ದಂತೆಯೇ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯುವತಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂದು ತಿಳಿದುಬಂದಿಲ್ಲ. ಸ್ಥಳದಲ್ಲಿ ಯುವತಿಯ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತು.

Edited By : Vijay Kumar
Kshetra Samachara

Kshetra Samachara

25/10/2020 03:05 pm

Cinque Terre

51.11 K

Cinque Terre

6

ಸಂಬಂಧಿತ ಸುದ್ದಿ