ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ಸೂಕ್ತ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು,ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಇಲ್ಲಿನ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 1.34 ಲಕ್ಷ ರೂ.ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.ಕೇಶ್ವಾಪುರದ ಜನತಾ ಕಾಲೋನಿಯಲ್ಲಿ ಸೋಮವಾರ ರಾತ್ರಿ ಮೊಬೈಲ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ಕುಳಗಳನ್ನು ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ.
Kshetra Samachara
03/11/2020 04:45 pm