ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಪವಾಡ ರೀತಿ ನಾಲ್ಕು ಜನ ಬಚಾವ್

ಧಾರವಾಡ: ಧಾರವಾಡ ಸಮೀಪದ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ಕು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿರಸಿ ಕಡೆಗೆ ಹೊರಟಿದ್ದ ಕಾರಿಗೆ ಬೆಂಗಳೂರು ಕಡೆಗೆ ಹೊರಟಿದ್ದ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಕಾರಿನ ಹಿಂಬಾಗ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ಯಾಂಟರ್ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Edited By : Vijay Kumar
Kshetra Samachara

Kshetra Samachara

02/12/2020 10:28 pm

Cinque Terre

70.54 K

Cinque Terre

1

ಸಂಬಂಧಿತ ಸುದ್ದಿ