ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

ಹಾವೇರಿ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾನಗಲ್ ಪಟ್ಟಣದ ಗರಡಿಮನಿ ಕ್ರಾಸ್ ಬಳಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಅಂಡಗಿ ಗ್ರಾಮದ ಗಣಪತಿ ಲಮಾಣಿ (೨೨) ಮೃತ ಬೈಕ್ ಸವಾರ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಅಪಘಾತದ ದೃಶ್ಯವನ್ನು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಣಪತಿ ಅವರು ಹಾನಗಲ್‌ನಿಂದ ತಮ್ಮ ಗ್ರಾಮಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಹಾನಗಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By : Vijay Kumar
Kshetra Samachara

Kshetra Samachara

20/12/2020 09:51 pm

Cinque Terre

69.84 K

Cinque Terre

0

ಸಂಬಂಧಿತ ಸುದ್ದಿ