ನವಲಗುಂದ: ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ನವಲಗುಂದದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ನರಗುಂದದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಾರಿಗೆ ಹುಬ್ಬಳ್ಳಿಯಿಂದ ನರಗುಂದದ ಕಡೆ ಬರುತ್ತಿದ್ದ ಟ್ರ್ಯಾಕ್ಟರ್ ಗುದ್ದಿದೆ. ಪರಿಣಾಮ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಅವರಿಗೆ ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
Kshetra Samachara
23/01/2021 07:09 pm