ಹುಬ್ಬಳ್ಳಿ: ಔಷಧ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಅಗಡಿ ಕ್ರಾಸ್‌ನಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 4ರಲ್ಲಿನ ಸರ್ವಿಸ್ ರಸ್ತೆಯಲ್ಲಿ ದುರಂತ ಸಂಭವಿಸಿದೆ. ಲಕ್ಷಾಂತರ ರೂ. ಮೌಲ್ಯದ ಔಷಧಗಳನ್ನು ಲಾರಿಯಲ್ಲಿ ಗೋವಾದಿಂದ ಬೆಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಆದರೆ ಅಗಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿ ಹೊಡೆದಿದೆ.
ಈ ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಓರ್ವನಿಗೆ ಗಾಯವಾಗಿದೆ. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಹುಬ್ಬಳ್ಳಿಯ ಗ್ರಾಮೀಣ ಹೊರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Kshetra Samachara
12/02/2021 06:40 pm