ಧಾರವಾಡ: ಸಾರಿಗೆ ಬಸ್ ಹಾಗೂ ಮಿನಿ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಗರದ ಟೋಲ್ ನಾಕಾದಲ್ಲಿ ಸೋಮವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಳಗಾವಿಯಿಂದ ಧಾರವಾಡಕ್ಕೆ ಬಂದಿದ್ದ ಬಸ್ ಬೈಪಾಸ್ ಕಡೆಗೆ ಹೊರಟಿತ್ತು. ಈ ವೇಳೆ ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಬಂದ ಕಂಟೇನರ್ ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಕಂಟೇನರ್ ಚಾಲಕ ಮದ್ಯ ಸೇವಿಸಿ ಚಾಲನೆ ಮಾಡಿದ್ದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಕಂಟೇನರ್ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Kshetra Samachara
15/02/2021 11:35 pm