ಕಲಘಟಗಿ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಮುಂಡಗೋಡ್ ಉಪ ತಹಶೀಲ್ದಾರ್ ವಿಜಯಕುಮಾರ್ ಶೆಟ್ಟೆಪ್ಪನವರ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ವಿಜಯಕುಮಾರ್ ಅವರು ಕಲಘಟಗಿ ತಾಲ್ಲೂಕಿನ ದಸ್ತಿಕೊಪ್ಪದಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದರು. ಆದರೆ ಮುಂಡಗೋಡ ಬಳಿ ರಾಷ್ಟ್ರೀಯ ಹೆದ್ದಾರಿ-63ನಲ್ಲಿ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಲಭಿಸಬೇಕಿದೆ.
Kshetra Samachara
16/02/2021 06:47 pm