ಹುಬ್ಬಳ್ಳಿ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಭೀಕರ ಘಟನೆ ಹುಬ್ಬಳ್ಳಿ ತಾಲೂಕಿನ ಶೆರೇವಾಡ ಸಮೀಪದ ಟೋಲ್ ಗೇಟ್ ಬಳಿ ನಡೆದಿದೆ.
ಕುಂದಗೋಳದಿಂದ ನೂಲ್ವಿ ಗ್ರಾಮದ ಕಡೆಗೆ ಬರುತ್ತಿದ್ದ ಬೈಕಿಗೆ ಎದುರಿಗೆ ಬಂದ ಬೈಕೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಪ್ರಾಣವನ್ನು ಬಿಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್‌ಗೆ ರವಾನೆ ಮಾಡಲಾಗಿದೆ.
ವೇಗವಾಗಿ ಬೈಕ್‌ಗಳನ್ನು ಚಲಾಯಿಸಿಕೊಂಡು ಬಂದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸದೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಕಲೆಹಾಕಿ ಸ್ಥಳಕ್ಕೆ ದೌಡಾಯಿಸಿದ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
23/02/2021 08:56 am