ಹುಬ್ಬಳ್ಳಿ: ವೇಗವಾಗಿ ಹೋಗುತ್ತಿದ್ದ ಬೈಕ್‌ವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಸಾವಿಗೀಡಾದ ಘಟನೆ ಉಣಕಲ್ ಕೆರೆ ಬಳಿ ಪ್ರೆಸಿಡೆಂಟ್ ಹೋಟೆಲ್ ಎದುರು ನಡೆದಿದೆ.
ಯುವಕರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿದೆ. ಹೀಗಾಗಿ ರಸ್ತೆಯ ಪಕ್ಕದ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮೃತ ಯುವಕರ ಗುರುತು ಪತ್ತೆಯಾಗಿಲ್ಲ.
ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಂಚಾರಿ ಠಾಣೆಯ ಪೊಲೀಸರು ಯುವಕರನ್ನು ಕಿಮ್ಸ್‌ಗೆ ರವಾನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
26/08/2021 11:54 am