ಧಾರವಾಡ: ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಧಾರವಾಡದ ಸಾರಸ್ವತಪುರದ ಸಾಗರ ಹಾಗೂ ಆತನ ಸ್ನೇಹಿತನೇ ಸಾವಿಗೀಡಾದವರು ಎಂದು ತಿಳಿದು ಬಂದಿದೆ. ವೇಗವಾಗಿ ಬಂದ ಬೈಕ್ ಹಾಗೂ ಕಾರಿನ ಮಧ್ಯೆ ಈ ಡಿಕ್ಕಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
19/09/2021 05:56 pm