ಹುಬ್ಬಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದರೆ, ಇಬ್ಬರು ಗಾಯಗೊಂಡಿರುವ ಘಟನೆ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಕ್ರಾಸ್ ಬಳಿ ನಡೆದಿದೆ.
ಗದಗ ನಿವಾಸಿ ವಿಠೋಬಾ ಹೂವಣ್ಣವರ ಮೃತ ದುರ್ದೈವಿ. ಮತ್ತೊಂದು ಕಾರ್ ಚಾಲಕ ಶ್ರೀನಿವಾಸ್ ನಾಯ್ಡುಗೆ ಗಂಭೀರ ಗಾಯವಾಗಿದ್ದು, ವಿರೂಪಾಕ್ಷ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗದಗ ಕಡೆಯಿಂದ ವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ವಾಹನದ ಟೈಯರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಕಾರಿನ ಮೇಲೆ ಬಿದ್ದು ಪಲ್ಟಿಯಾಗಿದೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
27/09/2021 06:58 pm