ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬಳಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನುಳಿದವರ ಸ್ಥಿತಿ ಗಂಭೀರವಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುವ ಕಾರ್ಯವನ್ನು ಮಾಡಿದ್ದಾರೆ. ಮೃತಪಟ್ಟ ಹಾಗೂ ಗಾಯಗೊಂಡವರು ಯಾರು ಎಂಬ ಮಾಹಿತಿಯನ್ನು ಪೊಲೀಸರು ಇದೀಗ ಕಲೆಹಾಕುತ್ತಿದ್ದು, ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
09/10/2021 08:14 pm