ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕಾರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಬೈಪಾಸ್ ಬಳಿ ನಡೆದಿದೆ.
ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸ್ಥಳಕ್ಕೆ ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
28/11/2021 11:14 am