ಹುಬ್ಬಳ್ಳಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಪಾಳೆ ಗ್ರಾಮದ 35 ವರ್ಷದ ಹನಮಂತಪ್ಪ ಮಾದರ ಎಂಬಾತ ಶನಿವಾರ ರಾತ್ರಿ ಪಾಳೆ ಗ್ರಾಮದ ಎನ್.ಎಚ್ 48 ಸರ್ವೀಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಹನುಮಂತಪ್ಪ ಗಂಭೀರವಾಗಿ ಗಾಯಗೊಂಡಿದ್ದ.
ಕೂಡಲೇ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಹನುಮಂತಪ್ಪ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು,ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಅಪಘಾತ ಮಾಡಿ ಪರಾರಿಯಾದ ವಾಹನದ ಪತ್ತೆಗೆ ಮುಂದಾಗಿದ್ದಾರೆ.
Kshetra Samachara
07/08/2022 10:04 pm