ಹುಬ್ಬಳ್ಳಿ: ರಸ್ತೆಯ ಮೇಲೆ ಕೆಲ ದ್ವಿಚಕ್ರ ವಾಹನ ಸವಾರರ ಅಟ್ಟಹಾಸ ಮಿತಿಮೀರಿದೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬೈಕ್ ಡಿಕ್ಕಿ ಹೊಡೆದಿದ್ದಲ್ಲದೇ ವಿದ್ಯಾರ್ಥಿಗಳ ಮೇಲೆಯೇ ಹಲ್ಲೆ ಮಾಡಲು ಮುಂದಾಗಿರುವ ಘಟನೆಯೊಂದು ಹುಬ್ಬಳ್ಳಿಯ ದೇಸಾಯಿ ಸರ್ಕಲ್ ಬಳಿ ನಡೆದಿದೆ.
ಹೌದು, ವೇಗವಾಗಿ ಬಂದ ಬೈಕ್ ಸವಾರನೊಬ್ಬ ದಾರಿಯಲ್ಲಿ ನಡೆದುಕೊಂಡು ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಪುನಃ ಅವರಿಗೆ ಹೊಡೆಯಲು ಮುಂದಾಗಿದ್ದಾನೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ಬೈದಾಡಿದ ಬೈಕ್ ಸವಾರ ಶಾಲಾ ವಿದ್ಯಾರ್ಥಿಗಳ ಜೊತೆಗೆ ಜಗಳಕ್ಕೆ ಮುಂದಾಗಿದ್ದಾನೆ. ಈ ಘಟನೆ ನೋಡಿದ ಸ್ಥಳೀಯರು ಹಾಗೂ ಟ್ರಾಫಿಕ್ ಪೊಲೀಸ್ ಬೈಕ್ ಸವಾರನಿಗೆ ಬುದ್ಧಿ ಹೇಳಿ ಕಳಿಸಿದ್ದಾರೆ.
ಒಟ್ಟಿನಲ್ಲಿ ಬೈಕ್ ಸವಾರರ ನುಸುಳುವಿಕೆಯಿಂದ ಪಾದಚಾರಿಗಳು ಸಂಕಷ್ಟ ಅನುಭವಿಸುವಂತಾಗಿದ್ದು, ಹೆಚ್ಚು ಕಡಿಮೆ ಆದರೇ ಜಗಳಕ್ಕೆ ಬರುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ.
Kshetra Samachara
11/08/2022 06:00 pm