ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶವ ತರಲು ಬರುತ್ತಿದ್ದ ಕ್ರೂಸರ್‌ಗೆ ಖಾಸಗಿ ಬಸ್‌ ಡಿಕ್ಕಿ- ಇಬ್ಬರು ಸಾವು

ಹುಬ್ಬಳ್ಳಿ: ನಗರದ ಕಿಮ್ಸನಲ್ಲಿ ಸಾವಿಗೀಡಾದ ವ್ಯಕ್ತಿಯೋರ್ವನ ಶವ ತೆಗೆದುಕೊಂಡು ಹೋಗಲು ಹುಬ್ಬಳ್ಳಿಗೆ ಬರುತ್ತಿದ್ದ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದೆ.

ಮೃತರು ಹಳಿಯಾಳ ತಾಲೂಕಿನ ನಂದಿಗಟ್ಟ ಗ್ರಾಮದವರು ಎಂದು ಗುರುತಿಸಲಾಗಿದೆ. ಕಿಮ್ಸ್‌ನಲ್ಲಿ ಮೃತಪಟ್ಟ ವ್ಯಕ್ತಿ ಶವ ತಗೆದುಕೊಂಡು ಹೋಗಲು ಆಗಮಿಸುತ್ತಿದ್ದಾಗ ಕ್ರೂಸರ್ ವಾಹನಕ್ಕೆ ರಾಮನಾಳ ಕ್ರಾಸ್ ಬಳಿ ಸೀಬರ್ಡ್ ಬಸ್ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ನಂದಿಗಟ್ಟದ ಶಿವನಗೌಡ ಪಾಟೀಲ, ಅಮೃತ ಪಾಟೀಲ ಸಾವಿಗೀಡಾಗಿದ್ದಾರೆ. ಚಾಲಕ ಮಾರುತಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ದೇವೇಂದ್ರ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕ್ರೂಸರ್ ವಾಹನ ಎರಡು ತುಂಡಾಗಿದೆ. ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/08/2022 10:00 am

Cinque Terre

135.44 K

Cinque Terre

4

ಸಂಬಂಧಿತ ಸುದ್ದಿ