ಧಾರವಾಡ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ಸಂಭವಿಸಿದೆ.
ಸುರೇಶ ಕಂಚನಹಳ್ಳಿ (17) ಎಂಬಾತನೇ ಮೃತಪಟ್ಟ ದುರ್ದೈವಿ. ಮೇವು ತರಲು ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಬೆಳಿಗ್ಗೆಯೇ ಹೊಲಕ್ಕೆ ಹೋಗಿದ್ದ ಈತ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತನಿಗಾಗಿ ಮನೆಯವರು ಹುಡುಕಾಟ ನಡೆಸಿದಾಗ ಹೊಲದಲ್ಲಿ ಆತ ಶವವಾಗಿ ಬಿದ್ದಿದ್ದ.
ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
30/08/2022 10:52 pm