ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅವೈಜ್ಞಾನಿಕ ಸಿಗ್ನಲ್‌ಗಳು ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಸಿಸಿ ಟಿವಿ ಕ್ಯಾಮೆರಾಗಳು ಸರಿಯಾಗಿ ಕೆಲಸ ಮಾಡುತ್ತವೆಯೋ ಇಲ್ಲವೋ ಗೊತ್ತಾಗುತ್ತಿಲ್ಲ. ಅಪಘಾತ ನಡೆದು 48 ಗಂಟೆಗಳಾದರೂ ಅಪಘಾತ ಮಾಡಿದವರ ಬಗ್ಗೆ ಇದುವರೆಗೂ ಪೊಲೀಸರಿಗೆ ಮಾತ್ರ ಮಾಹಿತಿಯೇ ಸಿಕ್ಕಿಲ್ಲ.
ಸಿನಿಮೀಯ ರೀತಿಯಲ್ಲಿ ಹಿಟ್ ಆಂಡ್ ರನ್ ಆಗಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಿದ್ಧೇಶ್ವರ ಪಾರ್ಕ್ ಬಳಿಯಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಮಾತ್ರ ಅಪಘಾತ ಮಾಡಿದವರ ಕುರಿತು ಯಾವುದೇ ಮಾಹಿತಿ ಇಲ್ಲದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಯ ಶಿರೂರ್ ಪಾರ್ಕ್ ರಸ್ತೆಯಲ್ಲಿರುವ ಸಿದ್ಧೇಶ್ವರ ಪಾರ್ಕ್ ಬಳಿಯಲ್ಲಿ ಸ್ಕೂಟಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಎಕ್ಟಿವ್ ಹೊಂಡಾ ಬೈಕ್ ಮೇಲೆ ಬರುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗುತ್ತಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೂ ಕೂಡ ಇದುವರೆಗೂ ಯಾರು ಕಾರ್ ಚಾಲನೆ ಮಾಡುತ್ತಿದ್ದರು? ಎಂಬುವಂತ ಮಾಹಿತಿ ಪೊಲೀಸರಿಗೆ ಸಿಗದೇ ಇರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ.
ಇನ್ನೂ ಅಪಘಾತದಲ್ಲಿ ಗಣೇಶ ಬಡಗೇಣ್ಣನವರ(27) ಸಾವನ್ನಪ್ಪಿದ್ದು, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಮೃತ ಯುವಕನನ್ನು ಆರೋಪಿಯನ್ನಾಗಿ ಬಿಂಬಿಸಿದ್ದು, ಈ ಕುರಿತು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/09/2022 10:39 pm