ಹುಬ್ಬಳ್ಳಿ: ಅದು ರಾತ್ರಿಯ ವೇಳೆ ನಿಶಬ್ಧವಾಗಿದ್ದ ಸಂದರ್ಭದಲ್ಲಿ ನಡೆದ ಭೀಕರ ರಸ್ತೆ ಅಪಘಾತ. ಆ ಅಪಘಾತದಲ್ಲಿ ಯುವಕನೊಬ್ಬ ಜೀವ ಕಳೆದುಕೊಂಡಿದ್ದಾನೆ. ಆದರೆ ಅಪಘಾತ ಮಾಡಿ ಎಸ್ಕೇಪ್ ಆಗಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಹಾಗೂ ದಾಖಲೆಗಳನ್ನು ಆಧರಿಸಿ ಆರೋಪಿಯ ವಶಕ್ಕೆ ಬಲೆ ಬಿಸಿದ್ದ ಪೊಲೀಸರು ಕೊನೆಗೂ ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ರವಿವಾರ ಬೆಳಗಿನ ಜಾವ ಕಾರು-ಬೈಕ್ ನಡುವೆ ಭೀಕರ ಅಪಘಾತ ನಡೆದಿತ್ತು. ಈ ದುರಂತದಲ್ಲಿ 27 ವರ್ಷದ ಗಣೇಶ ಎಂಬುವ ಯುವಕ ಸಾವನ್ನಪ್ಪಿದ್ದಾನೆ. ಆದರೆ ಎಫ್‌ಐಆರ್ ದಾಖಲಾಗಿದ್ದರೂ ಕೂಡ ಪೊಲೀಸರು ಅಪಘಾತ ಮಾಡಿದ ಉದ್ಯಮಿಯೊಬ್ಬರ ಮಗನ ಬಗ್ಗೆ ಹಾಗೂ ಕಾರ್ ಚಾಲನೆ ಮಾಡಿದವರ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವಿಸ್ತೃತ ವರದಿ ಬಿತ್ತರಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಆರೋಪಿ ಪ್ರತೀಕ ಭಂಡಾರಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ಹುಬ್ಬಳ್ಳಿಯ ಉಣಕಲ್ ಸಮೀಪ ಸಿದ್ದೇಶ್ವರ ಸರ್ಕಲ್‌ನಲ್ಲಿ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ನಡೆದ ಹಿಟ್ ಆ್ಯಂಡ್ ರನ್ ಕೇಸ್‌ನಲ್ಲಿ ಸ್ಥಳದಲ್ಲಿಯೇ ವಿದ್ಯಾನಗರದ ಬನಶಂಕರಿ ಬಡಾವಣೆ ನಿವಾಸಿ ಗಣೇಶ ಸಾವನ್ನಪ್ಪಿದ್ದಾನೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ್ರೂ ದೂರಿನಲ್ಲಿ ಡ್ರೈವರ್ ಎಂದು ಉಲ್ಲೇಖಿಸಿಲಾಗಿತ್ತು. ಆದರೆ ಯಾರು ಡ್ರೈವರ್ ಎಂಬುವುದೇ ಗೊತ್ತಾಗಿರಲಿಲ್ಲ. ಈ ಪ್ರಕರಣವನ್ನು ಲೇಟ್ ಆದರೂ ಲೇಟೆಸ್ಟ್ ಆಗಿ ಭೇದಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಮುಖ ಆರೋಪಿ ಕಾರ್ ಡ್ರೈವರ್ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಕಾರು ಚಾಲಕ ಯಾರೂ ಅನ್ನೋದೆ ಗೊತ್ತಿಲ್ವಾ ಪೊಲೀಸರಿಗೆ..? ಎಂಬುವಂತ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಈ ಎಲ್ಲ ಅನುಮಾನಕ್ಕೆ ಪೊಲೀಸರು ತೆರೆ ಎಳೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/09/2022 10:39 pm