ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಬಂಧಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತಂಡ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.
2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು.
ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಈಗ ಈ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಲಾಗಿದೆ.
Kshetra Samachara
05/11/2020 07:42 am