ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತನಿಖಾಧಿಕಾರಿಗೂ ಬಂತು ನಡುಕ: ಇಂದು ಟಿಂಗರಿಕರ್ ವಿಚಾರಣೆ ಸಾಧ್ಯತೆ

ಧಾರವಾಡ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿ ಬಂಧಿಸಿದ್ದರು. ಈ ಪ್ರಕರಣದಲ್ಲಿ ತನಿಖಾಧಿಕಾರಿ ಚೆನ್ನಕೇಶವ ಟಿಂಗರಿಕರ್​ ಅವರನ್ನು ಇಂದು ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದಾರೆ ಎನ್ನಲಾಗಿದೆ.

ಸಿಬಿಐ ಅಧಿಕಾರಿಗಳು ಟಿಂಗರಿಕರ್ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿದ್ದಾರೆ. ಹಲವು ಬಾರಿ ನೋಟಿಸ್ ನೀಡಿದರೂ ಕೂಡ ವಿಚಾರಣೆಗೆ ಬಾರದೇ ಟಿಂಗರಿಕರ್ ಗೈರಾಗಿದ್ದರು. ಅನಾರೋಗ್ಯದ ರಜೆ ಪಡೆದು ಅಜ್ಞಾತ ಸ್ಥಳದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ವಿನಯ್​ ಕುಲಕರ್ಣಿ ಸಹೋದರ ವಿಜಯ್​ ಅವರನ್ನ ಕೂಡ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

06/11/2020 10:34 am

Cinque Terre

21.86 K

Cinque Terre

0

ಸಂಬಂಧಿತ ಸುದ್ದಿ