ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮತ್ತೆ ವಿಚಾರಣೆಗೆ ಹಾಜರಾದ ವಿಜಯ ಕುಲಕರ್ಣಿ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಸಿಬಿಐ ಪೊಲೀಸರಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಅವರು ಇಂದೂ ಸಹ ಧಾರವಾಡದ ಉಪನಗರ ಠಾಣೆಯಲ್ಲಿ ಸಿಬಿಐ ವಿಚಾರಣೆಗೆ ಹಾಜರಾದರು.

ಈಗಾಗಲೇ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿದ್ದು, ಒಂದು ದಿನ ಅವರನ್ನು ನ್ಯಾಯಾಂಗ ಬಂಧನಕ್ಕೂ ನೀಡಲಾಗಿತ್ತು. ಇಂದು ಅವರ ವಿಚಾರಣೆ ಕೂಡ ನಡೆಯಲಿದೆ. ನಿನ್ನೆ ವಿಜಯ ಕುಲಕರ್ಣಿ ಅವರನ್ನೂ ವಿಚಾರಣೆ ನಡೆಸಿದ್ದ ಸಿಬಿಐ ಇಂದೂ ಅವರನ್ನು ಠಾಣೆಗೆ ಕರೆದುಕೊಂಡು ಬಂದು ಹೆಚ್ಚಿನ ವಿಚಾರಣೆ ನಡೆಸುತ್ತಿದೆ.

Edited By : Manjunath H D
Kshetra Samachara

Kshetra Samachara

06/11/2020 12:26 pm

Cinque Terre

33.7 K

Cinque Terre

0

ಸಂಬಂಧಿತ ಸುದ್ದಿ