ಕುಂದಗೋಳ: ಸಾಲದ ಬಾಧೆ ತಾಳಲಾರದೆ ರೈತನೋರ್ವ ಕೃಷಿ ಹೊಂಡಕ್ಕೆ ಹಾರಿ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದಲ್ಲಿ ಗುರುವಾರ ನಡೆದಿದೆ.
ಯಲಿವಾಳ ಗ್ರಾಮದ ಬಸವರಾಜ ಕಳಕಪ್ಪ ಉಮಚಗಿ (42) ಆತ್ಮಹತ್ಯೆಗೆ ಶರಣಾದ ರೈತ. ಮನೆಯ ಜವಾಬ್ದಾರಿ ನಿರ್ವಹಿಸುತ್ತಿದ್ದ ಬಸವರಾಜ ತಮ್ಮ ಹೊಲಕ್ಕೆ ಬೀಜ, ಗೊಬ್ಬರ, ಕ್ರಿಮಿನಾಶಕ ಹಾಕಲೆಂದು ಲಕ್ಷ್ಮೇಶ್ವರ ಯುನಿಯನ್ ಬ್ಯಾಂಕ್‌ನಲ್ಲಿ 4 ಲಕ್ಷ ರೂ. ಸಾಲ ಪಡೆದಿದ್ದರು. ಯಲಿವಾಳ ಗ್ರಾಮದಲ್ಲಿ ಲಾವಣಿ ಹೊಲ ಮಾಡಿದ್ದ ಬಸವರಾಜ ಅವರು ಅತಿವೃಷ್ಟಿಯಿಂದಾಗಿ ಸಾಲವನ್ನು ಹೇಗೆ ತೀರಿಸುವುದು ಎಂದು ಭಯಗೊಂಡ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಶರಣಾಗಿದ್ದಾರೆ.
ಬಸವರಾಜ ನವೆಂಬರ್ 1ರಿಂದ ಗುರುವಾರದ ಒಳಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
06/11/2020 11:31 pm