ಧಾರವಾಡ-ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸದ್ಯ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಇಂದು ಬೆಳಿಗ್ಗೆ 11ಕ್ಕೆ ವಿನಯ್ ಅವರ ಸಿಬಿಐ ಕಸ್ಟಡಿ ಅವಧಿ ಮುಗಿಯಲಿದೆ.
11 ಗಂಟೆ ನಂತರ ವಿನಯ್ ಕುಲಕರ್ಣಿಯನ್ನು ಧಾರವಾಡ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ವೇಳೆ ಸಿಬಿಐ ಅಧಿಕಾರಿಗಳು ವಿಚಾರಣೆಗಾಗಿ ಮತ್ತಷ್ಟು ಕಾಲಾವಕಾಶ ಕೇಳುವ ಸಾಧ್ಯತೆ ಇದೆ.
ಕಳೆದ ಮೂರು ದಿನಗಳಿಂದ ವಿನಯ್ ಅವರನ್ನು ಸತತ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಅವರ ಜನ್ಮದಿನದಂದೂ ಬಿಡುವು ನೀಡಿರಲಿಲ್ಲ.
Kshetra Samachara
09/11/2020 08:17 am