ಧಾರವಾಡ- ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಇಂದಿಗೆ ಮುಗಿದಿದೆ. ಹೀಗಾಗಿ ಅವರನ್ನು ಇಂದು ಬೆಳಿಗ್ಗೆ 11ಕ್ಕೆ ಧಾರವಾಡ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಕೈ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಆವರಣದಲ್ಲಿ ಜಮಾವಣೆಯಾಗುವಂತೆ ಪೋಸ್ಟ್ ಹಾಕಿದ್ದಾರೆ. ಜೊತೆಗೆ ನೂರಾರು ಕಾರ್ಯಕರ್ತರು ಹಾಗೂ ವಿನಯ್ ಅಭಿಮಾನಿಗಳು ಅದನ್ನು ಶೇರ್ ಮಾಡಿದ್ದಾರೆ. ಹೀಗಾಗಿ ಧಾರವಾಡ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯ ಕೈ ಕಾರ್ಯಕರ್ತರು ಸೇರುವ ಸಾಧ್ಯತೆ ಇದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಎಲ್ಲ ತಯಾರಿ ನಡೆಸಿಕೊಂಡಿದ್ದಾರೆ.
Kshetra Samachara
09/11/2020 09:41 am