ಧಾರವಾಡ: ಗುತ್ತಿಗೆದಾರರ ಲೈಸನ್ಸ್ ಮಾಡಿಕೊಡಲು ಹಣ ಕೇಳಿದ್ದ ಪಂಚಾಯತ್ ರಾಜ್ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಎಸಿಬಿ ಎಸ್ಪಿ ನ್ಯಾಮಗೌಡ ಮಾರ್ಗದರ್ಶನದಲ್ಲಿ ಇನ್ ಸ್ಪೆಕ್ಟರ್ ಹಿರೇಮಠ ಕಾರ್ಯಾಚರಣೆ ನಡೆಸಿದ್ದಾರೆ. ಕಲಘಟಗಿ ತಾಲೂಕಿನ ಕಾಮಧೇನು ಗ್ರಾಮದ ಮಹಿಳೆಯೋರ್ವಳು, ಲೈಸನ್ಸ್ ಮಾಡಿಸಲು ಪರವಾನಿಗಾಗಿ ಅಲೆದಾಡುತ್ತಿದ್ದರು.
ಹಲವು ಬಾರಿ ಕೆಲಸಕ್ಕಾಗಿ ಅಲೆದಾಡಿದರೂ ಯಾವುದೇ ರೀತಿಯ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
ದೂರಿನ ಅನ್ವಯ ಹಣದ ಸಮೇತ ದೂರುದಾರರು, ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೋಹರ ಮಾಂಡೋಲಿಕರ ಅವರಿಗೆ ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
Kshetra Samachara
10/11/2020 04:43 pm