ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಕೊಲೆ ನಡೆದ ಸಂದರ್ಭದಲ್ಲಿ ಟಿಂಗರೀಕರ್ ಉಪನಗರ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದರಿಂದ ಬಂಧನ ಭೀತಿಯಲ್ಲಿರುವ ಟಿಂಗರೀಕರ್ ಈ ಮೊದಲು ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅರ್ಜಿ ವಜಾಗೊಂಡಿತ್ತು.
ನ. 5ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ಇದೀಗ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
Kshetra Samachara
11/11/2020 08:08 am