ಧಾರವಾಡ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರಮ್ಯಾ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹುಬ್ಬಳ್ಳಿ, ಧಾರವಾಡ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ ನೇತೃತ್ವದ ಪೊಲೀಸರ ತಂಡ ಬರೊಬ್ಬರಿ 49 ಲಕ್ಷ ಹಣ ಜಪ್ತಿ ಮಾಡಿ 56 ಜನರನ್ನು ವಶಕ್ಕೆ ಪಡೆದಿದ್ದಾರೆ.
ರಮ್ಯಾ ರೆಸಿಡೆನ್ಸಿಯಲ್ಲಿ ಇಸ್ಪೀಟ್ ಅಡ್ಡೆ ನಡೆಯುತ್ತಿದ್ದರ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು, 66 ಮೊಬೈಲ್, 34 ವಿವಿಧ ವಾಹನ ಇದಲ್ಲದೇ 49 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ.
ಗೋವಾದಲ್ಲಿ ಕ್ಯಾಸಿನೋ ನಡೆಸುತ್ತಿದ್ದ ಸಮಂಧರ್ ಸಿಂಗ್ ಎಂಬಾತ ರಮ್ಯಾ ರೆಸಿಡೆನ್ಸಿಯಲ್ಲಿ ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ಎಂದು ಗೊತ್ತಾಗಿದೆ.
Kshetra Samachara
15/11/2020 10:53 am