ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯ ಕುಲಕರ್ಣಿಗೆ ಮತ್ತೆ ಸಿಬಿಐ ಬುಲಾವ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಈಗಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಜೈಲು ಸೇರಿದ್ದು, ಅದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು, ವಿನಯ್ ಅವರ ಸಹೋದರ ವಿಜಯ ಕುಲಕರ್ಣಿಗೆ ಮತ್ತೆ ಬುಲಾವ್ ನೀಡಿದ್ದಾರೆ.

ವಿನಯ್ ಅವರ ಬಂಧನದ ನಂತರವೂ ಸಿಬಿಐ ಅಧಿಕಾರಿಗಳು ಇನ್ನೂ ಹಲವರನ್ನು ಕರೆದು ವಿಚಾರಣೆ ನಡೆಸುತ್ತಲೇ ಇದ್ದಾರೆ.

ಇಂದು ಸಿಬಿಐ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ವಿಜಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದು, ಮತ್ತಷ್ಟು ಕುತೂಹಲ ಮೂಡಿಸಿದೆ. ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ ಐದು ಜನರ ತಂಡ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ಸಹ ಹಲವರನ್ನು ಕರೆಸಿ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇದರ ಜೊತೆಗೆ ಸೋಮು ನ್ಯಾಮಗೌಡ ಅವರನ್ನೂ ಸಿಬಿಐ ವಿಚಾರಣೆಗೊಳಪಡಿಸಿದೆ.

Edited By : Nagaraj Tulugeri
Kshetra Samachara

Kshetra Samachara

21/11/2020 06:01 pm

Cinque Terre

45.3 K

Cinque Terre

0

ಸಂಬಂಧಿತ ಸುದ್ದಿ