ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು.ಹಾಡುಹಗಲೇ ವ್ಯಕ್ತಿಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ನಗರದ ಬಾಬಾಸಾನ್ ಗಲ್ಲಿಯಲ್ಲಿ ನಡೆದಿದೆ.
ಕಮರಿಪೇಟೆಯ ರಮೇಶ ಭಾಂಡಗೆ ಎಂಬುವವರಿಗೆ ಚಾಕು ಇರಿದು ಕೊಲೆ ಮಾಡಲಾಗಿದೆ.ರಮೇಶ ಭಾಂಡಗೆ ಹಲವ ಧಂದೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.
ಇನ್ನೂ ವ್ಯಕ್ತಿಗೆ ಹಾಡುಹಗಲೇ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸ್ಥಳಕ್ಕೆ ಶಹರ ಪೊಲೀಸ್ ಅಧಿಕಾರಿಗಳಿಂದ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
25/11/2020 02:20 pm