ಹುಬ್ಬಳ್ಳಿ: ಮದುವೆ ಸಮಾರಂಭದಲ್ಲಿ ಚಿನ್ನದ ಸರ ಹಾಗೂ ಮೊಬೈಲ್ ಕಳ್ಳತನ ಮಾಡಿಕೊಂಡು ಬಂದು, ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಡಿಪ್ಲೊಮಾ ವಿದ್ಯಾರ್ಥಿಯೊಬ್ಬನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ದ್ಯಾಮವ್ವನ ಗುಡಿ ಸಮೀಪದ ಶಂಕರ ಕುಲಕರ್ಣಿ ಬಂಧಿತ ಆರೋಪಿ. ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಆತ ಡಿಪ್ಲೊಮಾ ಓದುತ್ತಿದ್ದಾನೆ. ಆರೋಪಿಯಿಂದ ಚಿನ್ನದ ನೆಕ್ಲೆಸ್, ತಾಳಿ ಸರ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಮುರಗೋಡ ಪಟ್ಟಣದ ಮದುವೆಯ ಸಮಾರಂಭದಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು,ಕದ್ದ ಮಾಲುಗಳನ್ನು ಮಾರಾಟ ಮಾಡಲು ರಮೇಶ ಭವನದ ಬಳಿ ಚಿನ್ನಾಭರಣದ ಅಂಗಡಿಯೊಂದನ್ನು ಹುಡುಕಾಡುತ್ತಿದ್ದ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆತನನ್ನು ಹಿಡಿದು ವಿಚಾರಿಸಿದಾಗ ಕೃತ್ಯದ ಬಗ್ಗೆ ಬಾಯ್ಬಿಟ್ಟ ಎಂದು ಪೊಲೀಸರು ತಿಳಿಸಿದರು.
Kshetra Samachara
02/12/2020 10:31 am