ಕುಂದಗೋಳ : ವ್ಯಕ್ತಿಯೊಬ್ಬ ಸಾರ್ವಜನಿಕರಿಗೆ 1 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಜನರಿಂದ ಹಣ ಪಡೆದುಕೊಂಡು ಸಾರ್ವಜನಿಕ ಸ್ಥಳದಲ್ಲಿ ಓಸಿ ನಂಬರ್ ಬರೆಯುತ್ತಿದ್ದಾಗ ಪೊಲೀಸರ್ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.
ಸಂಕ್ಲಿಪೂರ ಗ್ರಾಮದ ಬಸ್ ನಿಲ್ದಾಣದ ಬಳಿ 56 ವಯಸ್ಸಿನ ವ್ಯಕ್ತಿಯೊಬ್ಬ ಸಾರ್ವಜನಿಕರಿಂದ ಹಣ ಪಡೆದು ತನ್ನ ಸ್ವಂತ ಲಾಭಕ್ಕಾಗಿ ಓಸಿ ಚೀಟಿ ಬರೆಯುವಾಗ ಪೊಲೀಸರ ದಾಳಿಗೆ ಸಿಕ್ಕಿ ಬಿದ್ದಿದ್ದು, ಬಂಧಿತರಿಂದ 370 ರೂಪಾಯಿ ಹಣ 1 ಬಾಲ್ ಪೆನ್ 1 ಓಸಿ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.
Kshetra Samachara
05/12/2020 07:58 am