ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎಸಿಬಿ ಬಲೆಗೆ ಬಿದ್ದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ

ಹುಬ್ಬಳ್ಳಿ: ಜಮೀನಿನಲ್ಲಿದ್ದ ಮರಗಳ ಮಾಹಿತಿ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಬಿದಿದ್ದಾನೆ.‌

ಕುಂದಗೋಳದ ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಪರಶುರಾಮ ಹಲಕುರ್ಕಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಹುಬ್ಬಳ್ಳಿಯ ಮುತ್ತುಗೌಡ ಗಂಗನಗೌಡರ ಎಂಬುವರ ಜಮೀನು ಕುಂದಗೋಳದ ಬೆಳ್ಳಿಗಟ್ಟಿ ಬಳಿ ಹೆದ್ದಾರಿಗೆ ಹೋಗಿತ್ತು. ಜಮೀನು ಸ್ವಾಧೀನಪಡಿಸಿಕೊಂಡ ನಂತರ ಅದರಲ್ಲಿ ಎಷ್ಟು ಮರಗಳಿದ್ದವು ಎಂಬ ಮಾಹಿತಿಯನ್ನ ತೋಟಗಾರಿಕೆ ಇಲಾಖೆ ನೀಡದೇ ಹೆದ್ದಾರಿಯ ಹಣವನ್ನ ಕೊಡುತ್ತಿದ್ದರು. ಅದೇ ಕಾರಣಕ್ಕೆ ಸಹಾಯಕ ನಿರ್ದೇಶಕ ಪರಶುರಾಮ ಹಲಕುರ್ಕಿ ರೈತ ಮುತ್ತುಗೌಡ ಅವರಿಗೆ 50 ಸಾವಿರ ರೂ. ನೀಡುವಂತೆ ಡಿಮ್ಯಾಂಡ್ ಮಾಡಿದ್ದ. ಈಗಾಗಲೇ 10 ಸಾವಿರ ರೂ. ಮುಂಗಡ ಕೂಡ ಪಡೆದಿದ್ದ.‌ ಇಂದು ಉಳಿದ 40 ಸಾವಿರ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದಿದ್ದಾನೆ.

Edited By : Vijay Kumar
Kshetra Samachara

Kshetra Samachara

14/12/2020 08:58 pm

Cinque Terre

98.6 K

Cinque Terre

16

ಸಂಬಂಧಿತ ಸುದ್ದಿ