ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎಂಬ ಆರೋಪದಡಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಎರಡು ದಿನ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಚಂದ್ರಶೇಖರ ಇಂಡಿ ಅವರನ್ನು ಹೆಚ್ಚಿನ ವಿಚಾರಣೆ ಮಾಡುವ ಸಂಬಂಧ ಕಸ್ಟಡಿಗೆ ನೀಡುವಂತೆ ಸಿಬಿಐ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ ಚಂದ್ರಶೇಖರ ಅವರನ್ನು ಎರಡು ದಿನ ಸಿಬಿಐ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ನಿನ್ನೆಯಷ್ಟೇ ಚಂದ್ರಶೇಖರ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ನ್ಯಾಯಾಲಯ, ಇದೇ ಅವಧಿಯಲ್ಲಿ ಎರಡು ದಿನ ಸಿಬಿಐ ಕಸ್ಟಡಿಗೂ ತೆಗೆದುಕೊಳ್ಳುವಂತೆ ಆದೇಶ ಹೊರಡಿಸಿದೆ.
Kshetra Samachara
15/12/2020 08:57 pm