ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜೈಲು ಸೇರಿದ 'ಚಂದ್ರಾ'ಮ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರು ಜೈಲು ಪಾಲಾಗಿದ್ದಾರೆ.

ಸಿಬಿಐ, ಇಂಡಿ ಅವರನ್ನು ಎರಡು ದಿನ ತನ್ನ ಕಸ್ಟಡಿಗೆ ಪಡೆದುಕೊಂಡಿತ್ತು. ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ ಇಂಡಿ ಅವರನ್ನು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿತು. ಈ ಹಿಂದೆಯೇ ನ್ಯಾಯಾಲಯ ಇಂಡಿ ಅವರಿಗೆ ಡಿ.28ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತ್ತು. ಇಂದು ಕೂಡ ಡಿ.28ರ ವರೆಗೆ ಇಂಡಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಲ್ಲದೇ ಡಿ.19 ರಂದು ಕುಟುಂಬಸ್ಥರನ್ನು ಭೇಟಿ ಮಾಡಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ.

Edited By :
Kshetra Samachara

Kshetra Samachara

17/12/2020 08:45 pm

Cinque Terre

91.07 K

Cinque Terre

1

ಸಂಬಂಧಿತ ಸುದ್ದಿ