ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚುನಾವಣೆಗೆ ನಿಂತವ.. ನೇಣಿಗೆ ಕೊರೊಳೊಡ್ಡಿದ್ದೇಕೆ?

ಧಾರವಾಡ: ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.

ದಾಮೋದರ ಯಲಿಗಾರ (38) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವರು. ಗರಗ ಗ್ರಾಮದ ಎರಡನೇ ವಾರ್ಡಿನಿಂದ ಸ್ಪರ್ಧೆ ಮಾಡಿದ್ದ ದಾಮೋದರ ಬಿರುಸಿನ ಪ್ರಚಾರ ಕೂಡ ನಡೆಸಿದ್ದರಂತೆ.

ಇಂದು ಬೆಳಿಗ್ಗೆಯಿಂದ ಮತದಾನ ನಡೆಯುತ್ತಿತ್ತು. ಆದರೆ, ದಾಮೋದರ ತನ್ನ ಮನೆಯಲ್ಲಿ ನೇಣಿಗೆ ಕೊರೊಳೊಡ್ಡಿದ್ದಾರೆ. ಈ ಸುದ್ದಿ ತಿಳಿದ ಜನ ಅವರ ಮನೆ ಮುಂದೆ ಜಮಾಯಿಸಿದ್ದರು.

ದಾಮೋದರ, ಶಾಸಕ ಅಮೃತ ದೇಸಾಯಿ ಅವರ ಅನುಯಾಯಿ ಎಂದೂ ಹೇಳಲಾಗುತ್ತಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

22/12/2020 12:26 pm

Cinque Terre

57.71 K

Cinque Terre

7

ಸಂಬಂಧಿತ ಸುದ್ದಿ