ಧಾರವಾಡ: ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ಡಾ.ರಾಘವೇಂದ್ರ ನಾಯಕ ಅವರ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ತಡರಾತ್ರಿ ದೂರು ದಾಖಲಾಗಿದೆ.
ವಕೀಲರಾದ ಸುಧಾ ಕಾಟವಾ ಎನ್ನುವವರು ನ್ಯಾಯಾಲಯದ ಅನುಮತಿ ಪಡೆದು ಮಾನಸಿಕ ಆಸ್ಪತ್ರೆಯಲ್ಲಿರುವ ಮಾನಸಿಕ ಅಸ್ವಸ್ಥೆ ಕಲೈ ಸೆಲ್ವೆ ಅವರನ್ನು ಭೇಟಿ ಮಾಡಲು ಹೋಗಿದ್ದ ಸಂದರ್ಭದಲ್ಲಿ ಡಾ.ರಾಘವೇಂದ್ರ ನಾಯಕ ಅವರು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಅಲ್ಲದೇ ಡಾ.ರಾಘವೇಂದ್ರ ಅವರು ಸೆಕ್ಯುರಿಟಿ ಗಾರ್ಡ್ ಗಳನ್ನು ಕರೆದು ಸುಧಾ ಕಾಟವಾ ಅವರನ್ನು ಹೊರಗಡೆ ಹಾಕಿಸಿದ್ದಾರೆ. ಹೀಗಾಗಿ ಮಹಿಳೆಯರ ನಮ್ರತೆಗೆ ಧಕ್ಕೆ ತಂದ ಆರೋಪದಡಿ ಸುಧಾ ಕಾಟವಾ ಅವರು ಧಾರವಾಡದ ಉಪನಗರ ಠಾಣೆಯಲ್ಲಿ ಡಾ.ರಾಘವೇಂದ್ರ ಅವರ ವಿರುದ್ಧ ದೂರು ದಾಖಲು ಮಾಡಿದ್ದಾರೆ.
Kshetra Samachara
25/12/2020 09:48 am