ಧಾರವಾಡ: ಯುವಕನೊಬ್ಬ ಬಹಿರ್ದೆಸೆಗೆ ಹೊರಟಿದ್ದ ಅಪ್ರಾಪ್ತೆಯನ್ನ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ತಾಲೂಕಿನ 8 ವರ್ಷದ ಬಾಲಕಿ ಮೇಲೆ ಅದೇ ಗ್ರಾಮದ ಹುಸೇನಸಾಬ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಒಬ್ಬಳೆ ಬಹಿರ್ದೆಸೆಗೆ ಹೋಗುತ್ತಿದ್ದಳು. ಈ ವೇಳೆ ಅಲ್ಲಿಯೇ ಇದ್ದ ಯುವಕ ಕೃತ್ಯ ಎಸೆಗಿ ಪರಾರಿಯಾಗಿದ್ದ. ಬಳಿಕ ಮನೆಗೆ ಬಂದ ಬಾಲಕಿ ನಡೆದ ಘಟನೆಯನ್ನು ಪೋಷಕರಿಗೆ ತಿಳಿಸಿದ್ದಾಳೆ.
ಆರೋಪಿ ಹುಸೇನಸಾಬ್ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಧಾರವಾಡ ಮಹಿಳಾ ಠಾಣೆ ಪೊಲೀಸರು, ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಹಿಂದೆ ಧಾರವಾಡ ತಾಲೂಕಿನ ಎರಡು ಗ್ರಾಮಗಳಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಿದ್ದವು.
Kshetra Samachara
06/10/2020 10:04 pm