ಹುಬ್ಬಳ್ಳಿ: ನೇಮಕಾತಿ ಅಕ್ರಮದ ವಾಸನೆ ಎಲ್ಲೆಡೆಯೂ ಹರಡುತ್ತಿದೆ. ರಾಜ್ಯ ಸರ್ಕಾರದ ಬಹುತೇಕ ಹುದ್ದೆಗಳಲ್ಲಿ ಅಕ್ರಮ ನಡೆದಿದ್ದು, ತನಿಖೆ ಕೂಡ ನಡೆಯುತ್ತಿರುವ ಬೆನ್ನಲ್ಲೇ ಈಗ ರೈಲ್ವೇ ಇಲಾಖೆಯಲ್ಲೊಂದು ಗಂಭೀರ ಆರೋಪ ಕೇಳಿ ಬಂದಿದೆ. ಅಷ್ಟಕ್ಕೂ ಏನಿದು ಅಕ್ರಮದ ಆರೋಪ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್..
ಹೀಗೆ ರೈಲ್ವೆ ಪರೀಕ್ಷೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈಲ್ವೇ ಸಿಬ್ಬಂದಿ. ಮರು ಪರೀಕ್ಷೆಗೆ ಒತ್ತಾಯಿಸುತ್ತಿರುವ ಅಭ್ಯರ್ಥಿಗಳು. ದೊಡ್ಡಮಟ್ಟದ ಅಕ್ರಮ ನಡೆದಿದೆ ಎಂದು ಅಸಮಾಧಾನಗೊಂಡ ಸಿಬ್ಬಂದಿ. ಇದೆಲ್ಲದಕ್ಕೂ ಸಾಕ್ಷಿಯಾಗಿದ್ದು ಹುಬ್ಬಳ್ಳಿ ರೈಲ್ವೇ ವ್ಯವಸ್ಥಾಪಕ ನಿರ್ದೇಶಕರ ಕಚೇರಿ. ಹೌದು.. ರೈಲ್ವೇ ಗೂಡ್ಸ್ ಟ್ರೈನ್ ಮ್ಯಾನೇಜರ್ ಸಿಇಟಿಯ ಪ್ರಶ್ನೆಪತ್ರಿಕೆ ಬಹಿರಂಗ ಆರೋಪ ಗಂಭೀರವಾಗಿ ಕೇಳಿಬಂದಿದೆ. ಜಿ.ಟಿ.ಎಂ. ಪರೀಕ್ಷಾರ್ಥಿಗಳು ಹುಬ್ಬಳ್ಳಿಯ ನೈರುತ್ಯ ರೈಲ್ವೇ ಜಿ.ಎಂ. ಕಛೇರಿ ಬಳಿ ಹೋರಾಟ ನಡೆಸಿದ್ದು, ರೈಲ್ವೇ ಇಲಾಖೆಯಲ್ಲಿ ಪದೋನ್ನತಿಗಾಗಿ ನಡೆದಿದ್ದ ಸಿಇಟಿ
ಸೆಪ್ಟೆಂಬರ್ 04 ರಂದು ಜಿಟಿಎಲ್ ಆಂತರಿಕ ಸ್ಪರ್ಧಾ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಡೆಸಲಾಗಿತ್ತು. ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ವಾಟ್ಸಾಪ್ ನಲ್ಲಿ ಹರಿದಾಡಿದೆ ಎಂಬ ಆರೋಪ ಕೇಳಿ ಬಂದಿದೆ. 147 ಹುದ್ದೆಗಳಿಗೆ ಒಟ್ಟು 4685 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 200 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಶೇ. 95 ರಿಂದ 96 ರಷ್ಟು ಅಂಕ ಪಡೆದಿದ್ದು, ಮೇಲ್ನೋಟಕ್ಕೆ ಅಕ್ರಮ ನಡೆದಿದೆ ಅಂತ ಸಾಬೀತಾಗುತ್ತೆ ಅಂತ ಆರೋಪಿಸಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.
ಇನ್ನೂ ಸೂಕ್ತ ಕ್ರಮ ಕೈಗೊಳ್ಳುವಂತೆ ನೈರುತ್ಯ ರೈಲ್ವೇ ಜಿ.ಎಂ. ಗೆ ಮನವಿ ಸಲ್ಲಿಕೆ ಮಾಡಿದ್ದು, ಮರು ಪರೀಕ್ಷೆಗೆ ಅಭ್ಯರ್ಥಿಗಳ ಆಗ್ರಹಿಸಿದ್ದಾರೆ. ಪರೀಕ್ಷೆ ನಡೆದು ಎಂಟು ದಿನಗಳಾಗಿದೆ. ಪ್ರಶ್ನೆಪತ್ರಿಕೆ ಲೀಕ್ ಆಗಿತ್ತು ಅಂತ ಈಗ ಕೆಲ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಈ ಕುರಿತು ಪಾರದರ್ಶಕ ತನಿಖೆ ನಡೆಸೋದಾಗಿ ಸಿ.ಪಿ.ಆರ್.ಒ ಅನೀಶ್ ಹೆಗ್ಡೆ ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಅಭ್ಯರ್ಥಿಗಳ ಆರೋಪ ಗಂಭೀರವಾಗಿ ಕೇಳಿ ಬಂದಿದ್ದು, ಕೇಂದ್ರ ಸರ್ಕಾರ ವ್ಯವಸ್ಥೆ ಹಾಳು ಮಾಡಲು ಕೆಲವೊಂದು ಜಾಲ ಸಕ್ರಿಯವಾಗಿರುವುದು ಕಂಡುಬರುತ್ತಿದೆ. ಈ ಬಗ್ಗೆ ರೈಲ್ವೆ ಇಲಾಖೆ ಸೂಕ್ತ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅರ್ಹರಿಗೆ ಪದೋನ್ನತಿ ನೀಡುವ ಕೆಲಸವನ್ನು ಮಾಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/09/2022 06:45 pm