ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಕುಲಪತಿ ಡಾ.ಪಿ.ಈಶ್ವರ ಭಟ್ ಅವರಿಗೆ ಮಸಿ ಎರಚಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಕುಲಪತಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಲ್ಲದೆ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಕುಲಪತಿಗೆ ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜ.5 ರಂದು ಹುಬ್ಬಳ್ಳಿಯಲ್ಲಿ ನಡೆದಿದೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕುಲಪತಿ ಡಾ. ಈಶ್ವರ ಭಟ್ ನವನಗರ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.
ಇದುವರೆಗೆ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ. ಇನ್ನೂ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪರೀಕ್ಷೆ ಇಲ್ಲದೇ ಮುಂದಿನ ಸೆಮಿಸ್ಟರ್ಗೆ ಪ್ರಮೋಟ್ ಮಾಡುವುದು ಮತ್ತು ಪ್ರಮೋಟ್ ವಿಷಯಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವುದನ್ನು ವಾಪಸ್ ಪಡೆಯುವುದು ಹಾಗೂ
ಶೈಕ್ಷಣಿಕ ಕ್ಯಾಲೆಂಡರ್ ರೂಪಿಸುವಂತೆ ಒತ್ತಾಯಿಸಿ ಕಾನೂನು ವಿವಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/01/2022 09:07 am