ಹುಬ್ಬಳ್ಳಿ: ಅರಣ್ಯ ಇಲಾಖೆಯಲ್ಲಿ ಇತ್ತೀಚೆಗೆ ನಡೆದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. 117 ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆ ವೇಳೆ ಹಿರಿಯ ಅಧಿಕಾರಿಗಳು ಲಂಚ ಪಡೆದು ನೇಮಕಾತಿ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲ ಗೂಗಲ್ ಪೇ. ಪೋನ್ ಪೇ ಮೂಲಕ ಲಂಚ ಪಡೆದು ನೇಮಕಾತಿ ಆದೇಶ ನೀಡಿರುವುದನ್ನು ಪ್ರಶ್ನಿಸಿ ಎಸಿಬಿ ದೂರು ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ರಾಜ್ಯ ಅರಣ್ಯ ಇಲಾಖೆಯಲ್ಲಿ ಇತ್ತೀಚೆಗಷ್ಟೆ ಅರಣ್ಯ ರಕ್ಷಕ. ಉಪವಲಯ ಅರಣ್ಯ ಅಧಿಕಾರಿ. ವಲಯ ಅರಣ್ಯ ಅಧಿಕಾರಿ ಹುದ್ದೆಗಳಿಗ ನೇಮಕಾತಿ ಪ್ರಕ್ರಿಯೆ ನಡೆದಿದೆ. ಆದರೇ ಈ ನೇಮಕಾತಿ ಪ್ರಕ್ರಿಯೆ ವೇಳೆ ಭಾರಿ ಅಕ್ರಮ ನಡೆದಿದೆ ಎನ್ನುವ ಗಂಭೀರ ಆರೋಪ ಇದೀಗ ಕೇಳಿಬಂದಿದೆ. 117 ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆ ವೇಳೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಅಭ್ಯರ್ಥಿಗಳಿಂದ ನೇರವಾಗಿ ಲಂಚ ಪಡೆದು ನೇಮಕಾತಿ ಮಾಡಿದ್ದಾರಂತೆ. ಪೋನ್ ಪೇ. ಗೂಗಲ್ ಪೇ ಮೂಲಕ ಲಂಚ ಪಡೆದು ಅಕ್ರಮವಾಗಿ ನೇಮಕಾತಿ ಪ್ರಕ್ರಿಯೆ ನಡೆದಿದೆ ಎನ್ನುವುದು ಅಭ್ಯರ್ಥಿಗಳ ಆರೋಪವಾಗಿದೆ.
ವಿವಿಧ ಹುದ್ದೆಗಳ ನೇಮಕಾತಿ ವೇಳೆ ಅರಣ್ಯ ಭವನದಲ್ಲಿ ಕೆಲಸಮಾಡುವ ಅಧಿಕಾರಿಗಳ ಪತ್ನಿಯ ಅಕೌಂಟ್ ಗಳಿಗೆ ಪೋನ್ ಪೇ ಮೂಲಕ ಲಂಚದ ಹಣ ಸಂದಾಯ ಮಾಡಲಾಗಿದೆ ಅಂತೆ. ಅರಣ್ಯ ಭವನದಲ್ಲಿನ ಕಾರ್ಯನಿರ್ವಹಿಸುವ ಎಫ್ ಡಿಎ ಪ್ರಕಾಶ, ಕೃಪಾನಿಧಿ. ವ್ಯವಸ್ಥಾಪಕ ಉಮಾಶಂಕರ ಅಭ್ಯರ್ಥಿಗಳಿಂದ ಹಣ ಪಡೆದು ನೇಮಕಾತಿ ಪ್ರಕ್ರಿಯೆ ಮಾಡಿದ್ದಾರೆಂತೆ. ಮೆರಿಟ್ ಪ್ರಕಾರ ಅಭ್ಯರ್ಥಿಗಳನ್ನ ಆಯ್ಕೆ ಮಾಡದೇ ಲಂಚ ಪಡೆದು ನೇಮಕಾತಿ ಮಾಡಿರುವ ಬಗ್ಗೆ ಈಗಾಗಲೇ ಸುರೇಂದ್ರ ಎನ್ನುವ ವಕೀಲರು ಎಸಿಬಿಗೆ ದೂರು ಸಹ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಸರ್ಕಾರ ಎಸಿಬಿ ತನಿಖೆಗೆ ಅವಕಾಶ ಕಲ್ಪಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.
ಅರಣ್ಯ ಇಲಾಖೆಯಲ್ಲಿ ನಡೆದಿರುವ ಈ ನೇಮಕಾತಿ ಪ್ರಕ್ರಿಯೆಗೆ ಸಚಿವ ಉಮೇಶ ಕತ್ತಿ ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ. ಆದ್ರೆ ಲಂಚ ಪಡೆದು ಅಕ್ರಮ ಎಸಗಿರುವ ಅರಣ್ಯ ಇಲಾಖೆಯಲ್ಲಿನ ಹಿರಿಯ ಅಧಿಕಾರಿಗಳು ಸಾಕ್ಷಿ ನಾಶ ಪಡಿಸುವ ಮುನ್ನ ಎಸಿಬಿ ಅಧಿಕಾರಿಗಳು ತನಿಖೆ ನಡೆಸಲುಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು ಅನ್ನೋದು ಅಭ್ಯರ್ಥಿಗಳ ಆಗ್ರಹವಾಗಿದೆ.
Kshetra Samachara
11/09/2021 11:20 am