ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭ್ರಷ್ಟ ಅಧಿಕಾರಿ ಎಸಿಬಿ ಬಲೆಗೆ

ಹುಬ್ಬಳ್ಳಿ: ಆರ್.ಎಂ.ಪಿ ವೈದ್ಯನಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಆಯುಷ ಅಧಿಕಾರಿಯನ್ನು ಸೂಕ್ತ ಮಾಹಿತಿ ಕಲೆ ಹಾಕುವ ಮೂಲಕ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ದಾಳಿ ನಡೆಸಿದ ಧಾರವಾಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ಠಾಣೆ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಆರ್.ಜಿ.ಮೇತ್ರಿಯೇ ಎಸಿಬಿ ಬಲೆ ಬಿದ್ದಿರುವ ಭ್ರಷ್ಟ ಅಧಿಕಾರಿಯಾಗಿದ್ದಾರೆ. ಅಣ್ಣಿಗೇರಿಯ ಹರಿಶ್ಚಂದ್ರ ನಾರಾಯಣಪೂರ ಅವರು, ಆರ್‌.ಎಂ.ಪಿ ಕ್ಲಿನಿಕ್ ನಡೆಸುತ್ತಿದ್ದು, ಕ್ಲಿನಿಕ್ ಯಾವುದೇ ತೊಂದರೆ ಇಲ್ಲದಂತೆ ನಡೆಸಿಕೊಂಡು ಹೋಗಲು ಆರೋಪಿತ ಅಧಿಕಾರಿ ಮೇತ್ರಿ ಅವರು, ತಮಗೆ ಮತ್ತು ಡಿಎಚ್ಒ ಅವರಿಗೆ ಸೇರಿ 2,00,000 ಲಂಚದ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದು, ಲಂಚದ ಮುಂಗಡ ಹಣ 10,000 ರೂಪಾಯಿ ಲಂಚದ ಹಣವನ್ನು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ ಎಸಿಬಿ ಉತ್ತರ ವಲಯದ ಪೊಲೀಸ್ ಅಧೀಕ್ಷಕರಾದ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಭ್ರಷ್ಟ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.

Edited By : Nagaraj Tulugeri
Kshetra Samachara

Kshetra Samachara

24/02/2022 09:46 pm

Cinque Terre

25.56 K

Cinque Terre

2

ಸಂಬಂಧಿತ ಸುದ್ದಿ