ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ; 2 ಟಿಪ್ಪರ್ ವಶಕ್ಕೆ

ಹುಬ್ಬಳ್ಳಿ: ನಗರದಲ್ಲಿ ಅಕ್ರಮವಾಗಿ ಮರಳು ಹಾಗೂ ಎಂ ಸ್ಯಾಂಡ್ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರಗಳನ್ನು ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.

ನಗರದ ಕುಸುಗಲ್ ರಸ್ತೆಯಲ್ಲಿ ದಾಖಲೆಗಳು ಇಲ್ಲದೇ ಎಂಸ್ಯಾಂಡ್ ಹಾಗೂ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿ ಮಹೇಶ ದಾಳಿಯನ್ನು ಮಾಡಿದ್ದು, ಎರಡು ಟಿಪ್ಪರಗಳನ್ನು ವಶಕ್ಕೇ ಪಡೆದು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಕುಂದಗೋಳ ಲಕ್ಷ್ಮೇಶ್ವರ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಮಡಿದ್ದು, ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Edited By : Manjunath H D
Kshetra Samachara

Kshetra Samachara

22/09/2022 10:26 pm

Cinque Terre

76.61 K

Cinque Terre

0

ಸಂಬಂಧಿತ ಸುದ್ದಿ