ಹುಬ್ಬಳ್ಳಿ: ಅಕ್ರಮವಾಗಿ ಗೋವಾದಿಂದ ಕರ್ನಾಟಕಕ್ಕೆ ಮದ್ಯ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಕಲೆ ಹಾಕಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿತರು ಗೋವಾದಿಂದ ಯಾವುದೇ ಪಾಸ್ ಅಥವಾ ಪರವಾನಿಗೆ ಇಲ್ಲದ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮೂಲಕ 18 ಲೀಟರ್ ಗೋವಾ ಮದ್ಯ ಹಾಗೂ ಒಂದು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಜೆಸಿಇ ಮತ್ತು ಡಿಸಿಇ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದು,ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Kshetra Samachara
25/09/2020 03:23 pm